ಸುಳ್ಯ: ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಜೂ.1ರಂದು ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ
ಪ್ರಥಮ ಪಿಯುಸಿ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಹೆತ್ತವರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಅವರು ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ದಯಾಮಣಿ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯ ನಿಯಮಗಳ ಬಗ್ಗೆ ಮಾಹಿತಿ ನೀಡಿದರು .ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್. ಎಚ್ ಸ್ವಾಗತಿಸಿ ,ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಕಲಾ.ಎ. ಎಸ್ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ.ಎನ್. ಕಾರ್ಯಕ್ರಮ ನಿರೂಪಿಸಿದರು.