ಸುಳ್ಯ: ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಅಂತರಾಷ್ಟ್ರೀಯ ಯೋಗ ಪಟು ಮತ್ತು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಂತಹ ಶರತ್ ಕುಮಾರ್ ಎಂ.ಎಸ್ ಮುಖ್ಯ ಅತಿಥಿಯಾಗಿ

ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯೋಗಾಭ್ಯಾಸದಲ್ಲಿ ಹಲವು ದಾಖಲೆಗಳನ್ನು ಮಾಡಿದ ಅಕ್ಷಯ ಬಾಬ್ಲುಬೆಟ್ಟು ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ನಡೆಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ .ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪನ್ಯಾಸಕ ಶ್ರೀ ದಾಮೋದರ .ಎನ್ ವಂದಿಸಿದರು. ಉಪನ್ಯಾಸಕಿ ಸ್ವರ್ಣಕಲಾ ಎ. ಎಸ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕರಾದ ಬಾಲಚಂದ್ರ ಕಾರ್ಯಕ್ರಮ ಸಂಘಟಿಸಿದರು.ಸಂಸ್ಥೆಯ ಬೋಧಕ, ಬೋಧಕೇತರ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು
