ಸುಳ್ಯ: ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನ 2023- 2024ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು. ವಿದ್ಯಾರ್ಥಿನಿಯರಲ್ಲಿ ಪ್ರಜಾಸತ್ತಾತ್ಮಕ ತತ್ವಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಚುನಾವಣೆ ನಡೆಸಿ ಗೌಪ್ಯತೆಯಿಂದ ಮತದಾನ
ಮಾಡಲಾಯಿತು. ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಪರಿಷ್ಮಾ ಕೆ. ಡಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ, ಕಾರ್ಯದರ್ಶಿ ಸಹಲ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ, ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ. ಕೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ, ಜತೆ ಕಾರ್ಯದರ್ಶಿ ಸೋನಾ ಬಿ .ಎಸ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ, ಕ್ರೀಡಾ ಕಾರ್ಯದರ್ಶಿ ಕೃತಿ. ಎಲ್ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ, ಜತೆ ಕಾರ್ಯದರ್ಶಿ ಕೃತಿಕಾ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಇವರುಗಳು ಆಯ್ಕೆಯಾದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ್ ಎನ್ ರವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.