ಸುಳ್ಯ:ಸುಳ್ಯ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ದಯಾಮಣಿ. ಕೆ ಕನ್ನಡದ ಧ್ವಜಾರೋಹಣವನ್ನು ನೆರವೇರಿಸಿ, ಕನ್ನಡ

ತಾಯಿ ಭುವನೇಶ್ವರಿ ದೇವಿಗೆ ಪುಷ್ಪ ನಮನವನ್ನು ಸಲ್ಲಿಸಿ, ರಾಜ್ಯೋತ್ಸವದ ಮಹತ್ವವನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಐದು ಹಾಡುಗಳನ್ನು ವಿದ್ಯಾರ್ಥಿನಿಯರಿಂದ ಹಾಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿನಿ ವೃಂದದವರು ಭಾಗವಹಿಸಿದರು.









