ಸುಳ್ಯ:ಜೆಸಿಐ ಸುಳ್ಯ ಪಯಸ್ವಿನಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಸಮಾರಂಭ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ
ಮಾಲಕಿ ಶಶಿಕಲಾ ಪ್ರಭಾಕರನ್ ನಾಯರ್ ಅವರಿಗೆ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್’ ನೀಡಿ ಗೌರವಿಸಲಾಯಿತು.ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ತಹಶೀಲ್ದಾರ್ ಮಂಜುಳಾ ಪ್ರಶಸ್ತಿ ಪ್ರದಾನ ಮಾಡಿದರು.ಜೇಸಿಐ ಸುಳ್ಯ ಪಯಸ್ವಿನಿ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು. ಸುಳ್ಯ ಸಿಡಿಪಿಒ ಇಲಾಖೆಯ ಮೇಲ್ವಿಚಾರಕಿ ವಿಜಯ ಅಮೆಚೂರು ಶುಭಹಾರೈಸಿದರು.ಉಮೇಶ್ ಬೊಳುಗಲ್ಲು ಜೇಸಿವಾಣಿ ವಾಚಿಸಿದರು. ವಿನೋದ್ ಮೂಡಗದ್ದೆ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ತಾರಾ ಮಾಧವ ಚೂಂತಾರು ವಂದಿಸಿದರು.










