ಮಂಗಳೂರು: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್ ಬೂಡುಮಕ್ಕಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸುಳ್ಯ ಅಜ್ಜಾವರ ಗ್ರಾಮದ ಮುಳ್ಯದವರಾದ ಸತೀಶ್ ಬೂಡುಮಕ್ಕಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಹಾಗು ಜನ ಅಭಿವೃದ್ಧಿ ವೇದಿಕೆಯ ತಾಲೂಕು ಅಧ್ಯಕ್ಷರಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post