ಸುಳ್ಯ:ಸುಳ್ಯದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಜೂ.4 ರಂದು ಪೂ.7.30 ರಿಂದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಪ್ರಮುಖರು ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ
ಭಗವಾನ್ ಕನ್‌ಸ್ಟ್ರಕ್ಷನ್‌ನ ಮಾಲಕ ಕೆ.ಎಸ್.ಗೋಪಾಲಕೃಷ್ಣ ಬೋರ್ಕರ್ ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಸುಮಾರು ಎರಡೂವರೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪೂ.11ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಗೋಪಾಲಕೃಷ್ಣ ಬೋರ್ಕರ್ ಅಧ್ಯಕ್ಷತೆಯಲ್ಲಿ ನಡೆಯುವ
ಅರುಣ್ ಕುಮಾರ್ ಪುತ್ತಿಲ
ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಮಂಡೆಕೋಲು ಶ್ರೀ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಕೃಷಿಕರಾದ ಹರೀಶ್ ರಾವ್ ಹೆಬ್ಬಾರ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.
ಇತ್ತೀಚಿನ ವರ್ಷಗಳಲ್ಲಿ ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಸುಳ್ಯ ತಾಲೂಕಿನಲ್ಲಿ ಭಾಗವಹಿಸುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಅರುಣ್ ಕುಮಾರ್ ಪುತ್ತಿಲ ಅವರ ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ವಿನಂತಿಸಿದ್ದಾರೆ. ಹಿಂದೂ ಸಮಾಜದಲ್ಲಿ ಧಾರ್ಮಿಕ ಜಾಗೃತಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸತ್ಯನಾರಾಯಣ ಪೂಜೆ ಮಾಡಿಸುವವರು ಪ್ರತ್ಯೇಕ ಸಂಕಲ್ಪ ಮಾಡಿಸಲು ಜೂ.4 ರಂದು 8.30 ರಿಂದ 9.30ರ ಒಳಗೆ ಉಪಸ್ಥಿತರಿರಬೇಕು ಎಂದು ಅವರು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ
ಪ್ರಮುಖರಾದ ಸುಧಾಕರ ಬಾಟೋಳಿ, ಸೂರ್ಯ ಮುಗೇರು, ರಾಮ್ ಕುಮಾರ್ ಹೆಬ್ಬಾರ್, ರಕ್ಷಿತ್ ಅಡ್ಕಾರ್, ಪುಷ್ಪಾಧರ ಅರಂತೋಡು, ಶರತ್ ಉಬರಡ್ಕ, ಕಿಶನ್ ಹಳೆಗೇಟು ಮತ್ತಿತರರು ಉಪಸ್ಥಿತರಿದ್ದರು.