ಸುಳ್ಯ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟಂಬರ್ ಪ್ರಥಮ ವಾರದಿಂದ ಶನಿವಾರಗಳಂದು ದಿನ ಪೂರ್ತಿ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆಯ ಉನಿರ್ದೇಶಕರು ಆದೇಶ ನೀಡಿದ್ದಾರೆ. ಜುಲೈ ತಿಂಗಳಲ್ಲಿ ಸುರಿದ
ಅತೀ ಹೆಚ್ಚು ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಗಳ ಆದೇಶದಂತೆ 7 ದಿವಸಗಳ ಕಾಲ ರಜೆ ನೀಡಲಾಗಿತ್ತು. ಈ ರಜಾ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ತರರೆಗತಿ ನಷ್ಟವನ್ನು ಭರ್ತಿ ಮಾಡಲು ಸಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆಗಳನ್ನು ನಡೆಸುವಂತೆ ಆದೇಶಿಸಿದೆ.ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ.