ಮಂಗಳೂರು:ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಕಛೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2026ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆ ಮೈದಾನದ ಎದರುಗಡೆ ಇರುವ
ಎಸ್.ಜಿ ಸ್ಟೋರ್ ಬಿಲ್ಡಿಂಗ್ನ ಮೊದಲನೇ ಮಹಡಿಯಲ್ಲಿ ಪ್ರಾರಂಭವಾಗಿದೆ.ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೋಡಿಯಾಲ, ಆಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ
ಬಳಕೆದಾರರು ತಾವು ಬಳಸುವ ತೂಕ, ಅಳತೆ ಮತ್ತು ತೂಕದ ಸಾಧನಗಳನ್ನು ಶಿಬಿರ ಕಛೇರಿಗೆ ಹಾಜರುಪಡಿಸುವವರು ಪ್ರತಿ ಬುಧವಾರ ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಬೇಕು. ಶಿಬಿರವು ನವೆಂಬರ್ 4 ರಂದು ಮುಕ್ತಾಯಗೊಳ್ಳುತ್ತದೆ ಎಂದು ಪುತ್ತೂರು ಉಪವಿಭಾಗ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.









