ಸುಳ್ಯ:ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವತಿಯಿಂದ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ 5 ಲಕ್ಷ ಅನುದಾನ ಹಸ್ತಾಂತರ ಮಾಡಲಾಯಿತು. ಮೇ 23 ರಂದು ನಡೆದ ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನೂತನ ಕಟ್ಟಡ ಮತ್ತು
ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ 5 ಲಕ್ಷ ನೀಡುವುದಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅವರು ಘೋಷಣೆ ಮಾಡಿದ್ದರು. 5 ಲಕ್ಷ ಮೊತ್ತದ ಚೆಕ್ಕನ್ನು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಅವರಿಗೆ ಪುತ್ತೂರು ಪ್ರಧಾನ ಕಚೇರಿಯಲ್ಲಿ ಹಸ್ತಾಂತರಿಸಿದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಮಂಗಳೂರು ಇದರ ಸಿಬ್ಬಂದಿ ವರ್ಗದವರು, ಈ ಸಂದರ್ಭದಲ್ಲಿ ದ. ಕ. ಜೇನು ವ್ಯವಸಾಯಗಾರರ ಸಂಘದ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಜಯಾನಂದ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.














