ಮಂಗಳೂರು:ದ.ಕ. ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ(ಜು.7) ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾರಣ, ಜಿಲ್ಲೆಯ ಎಲ್ಲಾ
ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7 ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಗ್ರಾಮೀಣ ದೂರ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾ ಸಂಸ್ಥೆಗಳು ಅವಕಾಶ ಕಲ್ಪಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬಾರಿ ಮಳೆಯ ಹಿನ್ನಲೆಯಲ್ಲಿ ಜು.5 ಮತ್ತು 6 ರಂದು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.