ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಕೆಲವು ತಾಲೂಕುಗಳ ವಿದ್ಯಾ ಸಂಸ್ಥೆಗಳಿಗೆ ಇಂದು(ಜು.24) ರಜೆ ಘೋಷಿಸಲಾಗಿದೆ. 6 ತಾಲೂಕುಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯ
ಮಂಗಳೂರು, ಮೂಲ್ಕಿ, ಮೂಡಬಿದ್ರೆ, ಉಳ್ಳಾಲ, ಕಡಬ, ತಾಲೂಕಿನ
ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ರಜೆ ಸಾರಲಾಗಿದೆ. ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.











