ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ(ಜು.26) ಶಾಲೆ, ಪದವಿಪೂರ್ವ ಕಾಲೇಜುವರೆಗಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ವ್ಯಾಪಕ ಗಾಳಿ ಸಹಿತ ಮಳೆಯಾಗುವ ಸೂಚನೆ ಇದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ
ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು. 26ರ ಬುಧವಳವಾರ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ. ದೂರ ಮತ್ತು ಗ್ರಾಮೀಣ ಪ್ರದೇಶದ ಪದವಿ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗಲು ಅನಾನುಕೂಲ ಆದಲ್ಲಿ ಆನ್ ಲೈನ್ ಕ್ಲಾಸ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.