ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.2ರಂದು ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗೀ
ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ(12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.