ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಆ.18. ಸೋಮವಾರ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆ,ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.ಹವಾಮಾನ ಇಲಾಖೆ ಸೂಚನೆಯಂತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡ ಮಾರುತ ಬೀಸುವ ಸಾಧ್ಯತೆಯಿದ್ದು ಆ.18ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.





