ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಕೆಲವು ತಾಲೂಕುಗಳ ವಿದ್ಯಾ ಸಂಸ್ಥೆಗಳಿಗೆ ಇಂದು(ಜು.19) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಮಂಗಳೂರು, ಬಂಟ್ವಾಳ ಹಾಗೂ, ಉಳ್ಳಾಲ ತಾಲೂಕೊನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ
ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು ತಾಲೂಕಿನ
ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ರಜೆ ಸಾರಲಾಗಿದೆ. ಬಂಟ್ವಾಳ ಹಾಗೂ ಉಳ್ಳಾಲ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.














