ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಜೂ. 27 ಗುರುವಾರ ದ.ಕ.ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ
ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.
ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆವಹಿಸುವುದು.
ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.
ಎಂದು ಸೂಚಿಸಲಾಗಿದೆ.