ಮಂಗಳೂರು: ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 16ರಂದು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.