ಮಂಗಳೂರು:ಮಳೆ ಮುಂದುವರಿಯುವ ಸೂಚನೆಯ ಹಿನ್ನಲೆಯಲ್ಲಿ ಜುಲೈ 18 ಶನಿವಾರ ದ.ಕ.ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ, ಪ್ರೌಢ ಶಾಲೆ, ಹಾಗು ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ, ಪದವಿಪೂರ್ವ ವಸತಿ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.








