ಕಾಸರಗೋಡು:ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜೂನ್ 9ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ
ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಆದೇಶ ನೀಡಿದ್ದಾರೆ.ಪ್ರೊಫೆಷನಲ್ ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ, ಟ್ಯೂಶನ್ ಕೇಂದ್ರ, ಐಸಿಎಸ್ಇ, ಸಿಬಿಸಿಐ ಶಾಲೆಗಳು, ಕೇಂದ್ರೀಯ ವಿದ್ಯಾಲಯ, ಮದ್ರಸಗಳಿಗೂ ರಜೆ ಅನ್ವಯವಾಗಲಿದೆ. ಪೂರ್ವ ನಿಗಧಿತ ವಿಶ್ವವಿದ್ಯಾನಿಲಯ, ಸಾರ್ವಜನಿಕ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.













