ಮಂಗಳೂರು: ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ತಾಲೂಕು ಅಂದರೆ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ, ಮಂಗಳೂರು ಎ ಹೋಬಳಿ, ಸುರತ್ಕಲ್ ಹೋಬಳಿ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.