ಮಂಗಳೂರು: ಭಾರೀ ಮಳೆ ಮುಂದುವರಿದಿರು ಕಾರಣ ದ.ಕ.ಜಿಲ್ಲೆಯ 5 ತಾಲೂಕುಗಳ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 19ರಂದು ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. ಸುಳ್ಯ, ಪುತ್ತೂರು, ಕಡಬ,ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳ ಎಲ್ಲಾ
ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಮಂಗಳೂರು,ಉಳ್ಳಾಲ, ಮೂಡಬಿದ್ರೆ, ಮೂಲ್ಕಿ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಲಾಗಿದೆ.