ಸುಳ್ಯ: ಭಾರೀ ಮಳೆಯ ಹಿನ್ನಲೆಯಲ್ಲಿ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಪ್ರಕಟಣೆ ತಿಳಿಸಿದೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ.ಸರಕಾರಿ
ಕಿರಿಯ ಪ್ರಾಥಮಿಕ ಶಾಲೆ ದೇವರಹಳ್ಳಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಲ್ಕುಂದ,ಹರಿಹರ ಕ್ಲಸ್ಟರ್ ನ ಎಲ್ಲಾ ಶಾಲೆಗಳು ಈ ಶಾಲೆಗಳಿಗೆ ಜು.24 ರಂದು ಮಳೆ ಕಾರಣ ರಜೆ ಘೋಷಿಸಲಾಗಿದೆ. ಈ ದಿನದ ರಜೆಯನ್ನು ಮುಂದಿನ 2 ಶನಿವಾರಗಳಂದು ತರಗತಿ ನಡೆಸಿ ಮರುಹೊಂದಿಸಲು ಸೂಚಿಸಿದೆ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಜಿಲ್ಲೆಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದರು.