ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಎಲ್ಲಾ ತಾಲೂಕುಗಳ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು(ಜೂ.16) ರಜೆ ಘೋಷಿಸಲಾಗಿದೆ. ದ.ಕ.ಜಿಲ್ಲೆಯ ಎಲ್ಲಾ
ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜೂ.16ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಐದು ತಾಲೂಕುಗಳಲ್ಲಿ ಮಾತ್ರ ರಜೆ ಘೋಷಿಸಿ ಭಾನುವಾರ ಸಂಜೆ ಆದೇಶ ಮಾಡಲಾಗಿತ್ತು. ಇದೀಗ ಜಿಲ್ಲೆಯಾದ್ಯಂತ ಮಳೆ ಬಿರುಸುಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.