ಮಂಗಳೂರು: ದ.ಕ. ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ(ಜು.6) ಜಿಲ್ಲೆಯ
ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಯ ಹಿನ್ನಲೆಯಲ್ಲಿ ಜುಲೈ 5 ರಂದು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.