ಮಂಗಳೂರು:ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 4 ಮಂಗಳವಾರ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.