ಸುಳ್ಯ: ಡಿಸೆಂಬರ್ 21 ರಿಂದ 27 ರವರೆಗೆ ಮೂಡಬಿದಿರೆಯ ವಿದ್ಯಾನಗರಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದ ನಡೆಯಲಿದ್ದು ಈ ಹಿನ್ನೆಲೆಯಲ್ಲಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸುಳ್ಯ ಮತ್ತು ಪಂಜ ಸ್ಥಳೀಯ ಸಂಸ್ಥೆಗಳ ವತಿಯಿಂದ ಸುಳ್ಯದ ರೋಟರಿ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ರವರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಮೋಹನ್ ಆಳ್ವ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ತಾಲೂಕು ಆರೋಗ್ಯಾಧಿಕಾರಿ ಡಾ.ನಂದ ಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪಾಧ್ಯಕ್ಷೆ ವಿಮಲಾ ರಂಗಯ್ಯ, ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.