ಎಲಿಮಲೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ದ.ಕ, ಸರಕಾರಿ ಪ್ರೌಢ ಶಾಲೆ ಎಲಿಮಲೆ ಇದರ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್- ಗೈಡ್ಸ್ ಮೇಳ,ಕಬ್-ಬುಲ್ ಬುಲ್ ಉತ್ಸವ ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.ಭಾರತ್ ಸ್ಕೌಟ್ಸ್ ಮತ್ತು
ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ಅಧ್ಯಕ್ಷ ಶಶಿಧರ ಎಂ.ಜೆ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ರಾಜು ಪಂಡಿತ್, ಕಾರ್ಯದರ್ಶಿ ಪ್ರೇಮಲತಾ ಎ.ಎಚ್, ಎಲಿಮಲೆ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಸಂಧ್ಯಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು.