ಸುಬ್ರಹ್ಮಣ್ಯ:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಪಂಜ ಸ್ಥಳೀಯ ಸಂಸ್ಥೆ ವತಿಯಿಂದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ‘ಪ್ರಕೃತಿ ಅಧ್ಯಯನ ಚಾರಣ ಶಿಬಿರ’ ಸಮಾಪನಗೊಂಡಿತು. ರಾಜ್ಯ ಮುಖ್ಯ ಆಯುಕ್ತರಾದ
ಡಾ.ಪಿ.ಜಿ.ಆರ್ ಸಿಂಧ್ಯ,ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರು ಮುಖ್ಯ ಅತಿಥಿಯಾಗಿದ್ದರು.
ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಮಾಧವ ಬಿ ಕೆ ವಹಿಸಿದ್ದರು. ರಾಜ್ಯ ಸಂಘಟನಾ

ಆಯುಕ್ತರಾದ ಎಂ ಪ್ರಭಾಕರ್ ಭಟ್ , ದ. ಕ.ಜಿಲ್ಲಾ ಗೈಡ್ ಆಯುಕ್ತೆ ವಿಮಲ ರಂಗಯ್ಯ, ಕುಮಾರಸ್ವಾಮಿ ವಿದ್ಯಾಲಯದ ಅಧ್ಯಕ್ಷ ಗಣೇಶ್ ಪ್ರಸಾದ್, ಸಂಚಾಲಕ ಚಂದ್ರಶೇಖರ್ ನಾಯರ್, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಜಿಲ್ಲಾ ಸ್ಕೌಟ್ ಸಹಾಯಕ ಆಯುಕ್ತರಾ ದೇವಿಪ್ರಸಾದ್ ಜಾಕೆ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪಂಜ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶಿಬಿರದ ನಾಯಕರಾದ ಉದಯಕುಮಾರ್ ರೈ ಎಸ್ ಬಾಳಿಲ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಉಪಸ್ಥಿತರಿದ್ದರು.
ಭಾಗವಹಿಸಿದ ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.













