ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್ಸೈಟ್ಸ್ ವತಿಯಿಂದ ‘ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ’ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಜಿರೆಯ ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಪ್ರಶಸ್ತಿ ಸ್ವೀಕಾರ ಮಾಡಿದರು.
ಪ್ರಶಸ್ತಿಗೆ ಪಾತ್ರವಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಪ್ರಾಚಾರ್ಯರು, ಪೋಷಕರು ಹಾಗು ವಿದ್ಯಾರ್ಥಿಗಳು ಧನ್ಯವಾದಗಳನ್ನು ತಿಳಿಸಿರುತ್ತಾರೆ





