ಐವರ್ನಾಡು:ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಎಸ್ಡಿಎಂ ಉಜಿರೆ ತಂಡ ಸೆಮಿಫೈನಲ್ಗೆ ಪ್ರವೇಶಿಸಿದೆ. ಪ್ರಥಮ ಕ್ವಾರ್ಟರ್ ಫೈನಲ್ನಲ್ಲಿ

ಎಸ್ಡಿಎಂ ಉಜಿರೆ ತಂಡ ಕೆಎಫ್ಡಿಸಿ ತಂಡವನ್ನು 35-17 ಅಂಕಗಳ ಅಂತರದಿಂದ ಪರಾಭವಗೊಳಿಸಿ ಪ್ರಥಮ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿತು. ಲೀಗ್ ಹಂತದಲ್ಲಿ ಅಜೇಯರಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ಎಸ್ಡಿಎಂ ಉಜಿರೆ ತಂಡ ಭರ್ಜರಿ ಆಟದ ಮೂಲಕ ಮುನ್ನಡೆ ಕಾಯ್ದುಕೊಂಡು ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್ಗೆ ಎಂಟ್ರಿ ಕೊಟ್ಟಿತು. ಕೊನೆಯ ಲೀಗ್ ಪಂದ್ಯದಲ್ಲಿ ಜೆಕೆ ಅಕಾಡೆಮಿ ಕಾಸರಗೋಡು ಗೆಳೆಯರ ಬಳಗ ಐವರ್ನಾಡು ತಂಡವನ್ನು ಮಣಿಸಿತು.