ಅಡಿಲೇಡ್:ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು. ಅಡಿಲೇಡ್ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟೆಸ್ಟ್ ಐದು ದಿನಗಳ ಪಿಂಕ್ ಬಾಲ್ ಅಹರ್ನಿಶಿ ಟೆಸ್ಟ್ ಪಂದ್ಯದದಲ್ಲಿ 10 ವಿಕೆಟ್ಗಳಿಂದ ಸೋಲನುಭವಿಸಿದೆ. ಆಸ್ಟ್ರೇಲಿಯಾ ಕೇವಲ ಮೂರು ದಿನಗಳಲ್ಲೇ
ಗೆಲ್ಲುವ ಮೂಲಕ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು. 157 ರನ್ಗಳ ಭಾರೀ ಹಿನ್ನಡೆಯೊಂದಿಗೆ ಎರಡನೇ ಇನ್ನೀಂಗ್ಸ್ ಆರಂಭಿಸಿದ ಭಾರತ ತಂಡ ಎರಡನೇ ಇನ್ನಿಂಗ್ಸ್ನಲ್ಲಿ 175 ರನ್ ಗಳಿಸಿತು. ಈ ಮೂಲಕ ಆಸಿಸ್ ಪಡೆಗೆ ಕೇವಲ 19 ರನ್ಗಳ ಅಲ್ಪ ಮೊತ್ತದ ಗುರಿ ನೀಡಿತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸೀಸ್ ಪಡೆ ಯಾವುದೇ ವಿಕೆಟ್ ನಷ್ಟವಿಲ್ಲದೆ ಗೆಲುವು ಸಾಧಿಸಿತು.
ಎರಡನೇ ದಿನ ಭಾರತ ತಂಡ ಎರಡನೇ ಇನಿಂಗ್ಸ್ನಲ್ಲಿ ಐದು ವಿಕೆಟ್ಗಳ ನಷ್ಟಕ್ಕೆ 128 ರನ್ ಗಳಿಸಿತು. ರಿಷಭ್ ಪಂತ್ ಮತ್ತು ನಿತೀಶ್ ಕುಮಾರ್ ಕ್ರೀಸ್ ಕಾಯ್ದುಕೊಂಡಿದ್ದರು. ಮೂರನೇ ದಿನ (ಭಾನುವಾರ) ಆರಂಭವಾದ ಕೆಲವೇ ಕ್ಷಣಗಳಲ್ಲಿ ರಿಷಭ್ ಪಂತ್ (28) ಔಟಾದರು. ನಿತೀಶ್ ಕುಮಾರ್ (42) ಹೋರಾಟದಿಂದ ಭಾರತ ಇನಿಂಗ್ಸ್ ಸೋಲನ್ನು ತಪ್ಪಿಸಿತು.
ಮೂರನೇ ಟೆಸ್ಟ್ ಡಿಸೆಂಬರ್ 14 ರಿಂದ ಬ್ರಿಸ್ಬೇನ್ನಲ್ಲಿ ಆರಂಭವಾಗಲಿದೆ