ಬೆಂಗಳೂರು: ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಗೆ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಅರ್ಹತೆ ಗಿಟ್ಟಿಸಿವೆ.
ಸೆಮಿಫೈನಲ್ ಪಂದ್ಯಗಳು ನವೆಂಬರ್ 15 ಮತ್ತು 16ರಂದು ಮುಂಬೈ ಮತ್ತು ಕೋಲ್ಕತ್ತದಲ್ಲಿ ನಡೆಯಲಿವೆ. ಲೀಗ್ ಹಂತದಲ್ಲಿ ಆಡಿರುವ ಎಲ್ಲ ಪಂದ್ಯಗಳಲ್ಲೂ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ

ಭಾರತಕ್ಕೆ ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡ ನ.15ರಂದು ಮುಂಬೈನಲ್ಲಿ ನಡೆಯುವ ಮೊದಲ ಸೆಮಿಫೈನಲ್ನಲ್ಲಿ ಎದುರಾಳಿಯಾಗಲಿದೆ.ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನ.16ರಂದು ಕೋಲ್ಕತ್ತಾದಲ್ಲಿ ಮುಖಾಮುಖಿಯಾಗಲಿವೆ.
ನ.19ರಂದು ವಿಶ್ವಕಪ್ ಫೈನಲ್ ಅಹಮ್ಮದಾಬಾದ್ನಲ್ಲಿ
ನಡೆಯಲಿದೆ. 16 ಅಂಕ ಗಳಿಸಿರುವ ಭಾರತ, 14 ಅಂಕಗಳಿಸಿರುವ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಹಾಗೂ 10 ಅಂಕ ಪಡೆದ ನ್ಯೂಝಿಲೆಂಡ್ ಸೆಮಿ ಫೈನಲ್ ಪ್ರವೇಶಿಸಿದೆ.









