ಪಂಜ: ಸರ್ವರ್ ಸಮಸ್ಯೆಯಿಂದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತಿದೆ. ಇದನ್ನು ಪರಿಹರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಲು ಪಂಜದಲ್ಲಿ ನಡೆದ ಬಿಜೆಪಿ ಸುಳ್ಯ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಾಲ ಮನ್ನಾ
ಯೋಜನೆಯಲ್ಲಿ ಖಾತೆಗೆ ಹಣ ಬರಲು ಬಾಕಿ ಇರುವ ರೈತರಿಗೆ ಕೂಡಲೇ ಬಿಡುಗಡೆ ಮಾಡಲು ಸರಕಾರವನ್ನು ಒತ್ತಾಯಿಸಲಾಗುವುದು. ಅಡಿಕೆ ಹಳದಿ ರೋಗ, ಎಲೆ ಚುಕ್ಕಿ ರೋಗ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ಬಂದರು ಮೀನುಗಾರಿಕೆ ಮತ್ತು ಓಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್,ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ದಾಸ್ ಬಂಟ್ವಾಳ್,ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ವೆಂಕಟ್ ವಳಲಂಬೆ, ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್ ಮತ್ತಿತರರು ಭಾಗವಹಿಸದ್ದರು.