ಸುಳ್ಯ: ಸುಳ್ಯ ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ವತಿಯಿಂದ ನೂತನ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಜೂ.21ರಂದು ಸುಳ್ಯ ಕೇರ್ಪಳದ ಶ್ರೀ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದೆ. ಶಾಸಕಿ ಭಾಗೀರಥಿ ಮುರುಳ್ಯ ಆಂಬುಲೆನ್ಸ್ ಲೋಕಾರ್ಪಣೆ ಮಾಡುವರು. ಸೇವಾ ಭಾರತಿ ಮಂಗಳೂರು ವಿಭಾಗ
ಪ್ರಮುಖ್ ಡಾ.ನಾರಾಯಣ ಶೆಣೈ ವಿಷಯ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಅಂಗಾರ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ, ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ದಿ.ಪುಟ್ಟಪ್ಲ ಜೋಷಿ ಮೆಮೋರಿಯಲ್ ಟ್ರಸ್ಟ್ನ ಅಧ್ಯಕ್ಷ ಸುಧಾಕರ ಕಾಮತ್, ಭಾಲಾವಲಿಕಾರ್ ರಾಜಾಪುರ ಸಾರಸ್ವತ ಸಮಾಜದ ಅಧ್ಯಕ್ಷ ಹೇಮಂತ್ ಕುಮಾರ್ ಕಂದಡ್ಕ ಭಾಗವಹಿಸಲಿದ್ದಾರೆ ಎಂದು ಸೇವಾ ಭಾರತಿ ಪ್ರಕಟಣೆ ತಿಳಿಸಿದೆ.