ಸುಳ್ಯ:ಬಶೀರ್ ಆರ್ ಬಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಮಂಗಳೂರು ಅತ್ತಾವರದಲ್ಲಿರುವ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಇದರ
ಅಧ್ಯಕ್ಷ ಬಶೀರ್ ಆರ್ಬಿ ಯವರು ಪೈಚಾರ್ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದು ಧಾರ್ಮಿಕ ರಾಜಕೀಯ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಪೈಚಾರು ಭಾಗದಲ್ಲಿ ಹಲವಾರು ಸಂಘ ರಚಿಸಿಕೊಂಡು ಸಮಾಜ ಸೇವೆ ನಡೆಸುತ್ತಾ ಬಂದಿದ್ದಾರೆ.ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾಗಿ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಾಜಿ ಕೋಶಾಧಿಕಾರಿಯಾಗಿ ಹಾಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.ಸುಳ್ಯ ಪೈಚಾರ್ ಮುಳುಗು ತಜ್ಞರ ತಂಡದ ಸದಸ್ಯರಾಗಿ ಸೇವೆ ಸಲ್ಲಿಸಿರುತ್ತಾರೆ.ವಾಹನ ಅಪಘಾತಗಳು,ಅನಾಹುತಗಳು ಸಂಭವಿಸಿದರೆ ತಮ್ಮ ತಂಡದ ಸದಸ್ಯರೊಂದಿಗೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಮುಂದಾಗುತ್ತಾರೆ.