ಸುಳ್ಯ: ಮಹಿಳೆಯರಿಗೆ ಸರಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಭಾನುವಾರ ಚಾಲನೆ ನೀಡಲಾಯಿತು. ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದ ಶಕ್ತಿ ಯೋಜನೆ ಚಾಲನಾ ಕಾರ್ಯಕ್ರಮಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಜನಪ್ರತಿನಿಧಿಗಳು ಗೈರು ಹಾಜರಾಗಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ
ನಗರ ಪಂಚಾಯತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಗೈರು ಹಾಜರಾಗಿದ್ದಾರೆ. ಶಾಸಕರ ಅನುಪಸ್ಥಿತಿಯಲ್ಲಿ ತಹಶಿಲ್ದಾರ್ ಜಿ.ಮಂಜುನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ, ನಗರ ಪಂಚಾಯತ್ನ ಕಾಂಗ್ರೆಸ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಶರೀಫ್ ಕಂಠಿ, ಡೇವಿಡ್ ಧೀರಾ ಕ್ರಾಸ್ತಾ ಭಾಗವಹಿಸಿದ್ದರು. ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುತ್ತಾರೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು, ಕ್ಷೇತ್ತದಲ್ಲಿ ಶಾಸಕರು ಚಾಲನೆ ನೀಡಲಿದ್ದಾರೆ ಎಂದು ಪ್ರಕಟಿಸಲಾಗಿತ್ತು.