ದಾವಣಗೆರೆ: ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.ಇವರಿಗೆ ಗಣಿ ಮತ್ತು ಭೂವಿಜ್ಞಾನ ಸಚಿವರೂ ಆಗಿರುವ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ
ಮೂವರು ಪುತ್ರರು. ನಾಲ್ವರು ಪುತ್ರಿಯರು ಹಾಗೂ ಸಂಸದೆ, ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ್ ಇದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಶಾಮನೂರು ಕಲ್ಲಪ್ಪ–ಸಾವಿತ್ರಮ್ಮ ದಂಪತಿ ಪುತ್ರರಾಗಿ 1931ರ ಜೂನ್ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ ಮೂಲತಃ ಉದ್ಯಮಿ. ರಾಜಕೀಯ ಕ್ಷೇತ್ರ ಪ್ರವೇಶಿಸಿದ ಇವರು 6 ಬಾರಿ ಶಾಸಕರಾಗಿ, ಸಚಿವರಾಗಿ ಹಾಗೂ ಒಮ್ಮೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಸುದೀರ್ಘ ಅವಧಿಗೆ ಕೆಪಿಸಿಸಿ ಖಜಾಂಚಿಯಾಗಿದ್ದರು.
ಲ1969ರಲ್ಲಿ ನಗರಸಭೆ ಮೂಲಕ ರಾಜಕೀಯ ಪ್ರವೇಶಿಸಿದ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಿ ಆಯ್ಕೆಯಾದರು.
ಶಾಮನೂರು ಶಿವಶಂಕರಪ್ಪ 2012ರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು.













