ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅರ್ಜುನ ಪ್ರಶಸ್ತಿ ವಿತರಿಸಿದರು.ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು. ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮುಹಮ್ಮದ್ ಶಮಿ ಅವರ ಹೆಸರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿತ್ತು.ಕೇವಲ ಏಳು ಪಂದ್ಯಗಳಲ್ಲಿ
24 ವಿಕೆಟ್ ಗಳನ್ನು ಕಬಳಿಸುವ ಮೂಲಕ ಶಮಿ ತಮ್ಮ ಏಕದಿನ ವಿಶ್ವಕಪ್ 2023 ಯಾತ್ರೆ ಅನ್ನು ಯಶಸ್ವಿಯಾಗಿ ಮುಗಿಸಿದ್ದರು.
2023ರ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕಾರಣಕ್ಕೆ ಒಟ್ಟು 26 ಮಂದಿ ಅಥ್ಲೀಟ್ ಗಳು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.
ಬ್ಯಾಡ್ಮಿಂಟನ್ ತಾರೆಗಳಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರಿಗೆರಾಷ್ಟ್ರಪತಿ ದ್ರೌಪದಿ ಮರ್ಮು ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.





