ಸುಳ್ಯ: ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಅರೋಗ್ಯ ಹಾಗೂ ಸಮಾಜಕಲ್ಯಾಣ ಇಲಾಖೆಯಿಂದ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ವಿಶ್ವ ದೃಷ್ಟಿ ದಿನಾಚರಣೆಯ
ಪ್ರಯುಕ್ತ ಅರೋಗ್ಯ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ತಾಲೂಕು ಅರೋಗ್ಯಾಧಿಕಾರಿ ಕಚೇರಿಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳಾ ನಿಮ್ಮ ಕಣ್ಣುಗಳನ್ನು ಪ್ರೀತಿಸಿ’ಎನ್ನುವ ವಿಷಯದೊಂದಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಕಲಾ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.