ಸುಳ್ಯ:ಮಿಷನ್ ಶಕ್ತಿ ಯೋಜನೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ, ಮಂಗಳೂರು ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ‘ಮಹಿಳಾ ಸಬಲೀಕರಣ’ ಅರಿವು ಕಾರ್ಯಕ್ರಮವು ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು
ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ ಅವರು ವಹಿಸಿದರು. ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ಬಿ ಮಾತನಾಡಿ ವಿದ್ಯಾರ್ಥಿಗಳು ಅಂಕಗಳ ಜೊತೆ ಕೌಶಲ್ಯವನ್ನು ಕೂಡ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವಿಶೇಷವಾಗಿ ಮಹಿಳಾ ಸಬಲೀಕರಣದ ಅಂಗವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ STEM (Science,Technology,Engineering,Mathematics) ಇದರ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಮಿಷನ್ ಶಕ್ತಿ ಯೋಜನೆಯ ಜಿಲ್ಲಾ ಕಾರ್ಯಕ್ರಮಗಳ ಸಂಯೋಜಕಿ ಅಶ್ವಿನಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಿ ಜೊತೆಗೆ ಮಹಿಳೆಯರು ವಿಜ್ಞಾನವನ್ನು ಹೆಚ್ಚು ಅಧ್ಯಯನ ಮಾಡಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ವಿಜ್ಞಾನಿಗಳಾಗಬೇಕೆಂದು ಹೇಳಿದರು. ರಾಜ್ಯಶಾಸ್ತ್ರ ಉಪನ್ಯಾಸ ದಾಮೋದರ ಎನ್ ಸ್ವಾಗತಿಸಿ ಇತಿಹಾಸ ಉಪನ್ಯಾಸಕಿ ಶ್ರೀ ಪ್ರಸನ್ನ ಎನ್ ಎಚ್ ವಂದಿಸಿದರು. ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಉಷಾ ಎಂ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಂದ STEM ಆಧಾರದಲ್ಲಿ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರು ಮತ್ತು ಪ್ರಾಂಶುಪಾಲರು ಸ್ಮರಣಿಕೆ ನೀಡಿ ಗೌರವಿಸಿದರು.





