ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ದಕ್ಷಿಣ ಕನ್ನಡ ಪದವಿ ಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಕಲ್ಲಬೆಟ್ಟು, ಮೂಡಬಿದಿರೆ ಇಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ
ಶೇ.100 ಫಲಿತಾಂಶ ದಾಖಲಿಸಿದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸತತವಾಗಿ ಮೂರು ವರ್ಷದಿಂದ ಶೇ.100 ಫಲಿತಾಂಶವನ್ನು ದಾಖಲಿಸುತ್ತಾ ಬಂದಿರುತ್ತದೆ. 2024- 25 ನೇ ಸಾಲಿನಲ್ಲಿ ಶೇಕಡ 100 ಫಲಿತಾಂಶವನ್ನು ಪಡೆದುಕೊಂಡಿರುವುದಕ್ಕೆ ಸಂಸ್ಥೆಯ ಉಪನ್ಯಾಸಕರನ್ನು ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡರು ಸನ್ಮಾನಿಸಿದರು.

ಕರ್ನಾಟಕ ಸರಕಾರದ ಶಿಕ್ಷಕರ ನಿಧಿಯಿಂದಲೂ ಶೇಕಡ 100 ಫಲಿತಾಂಶ ದಾಖಲಿಸಿರುವುದಕ್ಕೆ ನಗದು ಬಹುಮಾನವಾಗಿ ರೂಪಾಯಿ 50,000 ವನ್ನು ಪಡೆದುಕೊಂಡರು.ಸಂಸ್ಥೆಯ ಆಡಳಿತ ಮಂಡಳಿ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರು ಪ್ರಶಸ್ತಿಯನ್ನು ಪಡೆದಿರುವುದಕ್ಕೆ ಉಪನ್ಯಾಸಕರನ್ನು ಅಭಿನಂದಿಸಿರುತ್ತಾರೆ.





