ಸುಳ್ಯ:ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶ್ರೀ ಶಾರದಾ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇದರಲ್ಲಿ
7 ಮಂದಿ ಡಿಸ್ಟಿಂಕ್ಷನ್, 25 ಮಂದಿ ಪ್ರಥಮ ದರ್ಜೆ, 5 ಮಂದಿ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ತನುಶ್ರೀ 589 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ, ಸಮೀಕ್ಷಾ ಡಿ ಎಸ್ 582 ಅಂಕ ಗಳಿಸಿ ದ್ವಿತೀಯ ಸ್ಥಾನ, ಫಾತಿಮತ್ ಶಫಾನ 557 ಅಂಕಗಳೊಂದಿಗೆ ಮತ್ತು ಸಮೃದ್ಧಿ. ಸಿ 557 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ. ಸಾನ್ವಿ ಕೆ ಆರ್(539), ಶಝ್ನಮರಿಯಂ (537), ದೀಕ್ಷಿತಾ ಕೆ ಆರ್ (532) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.














