ಸುಳ್ಯ: ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಸ್ವಾಗತ ಕಾರ್ಯಕ್ರಮ ಹಾಗೂ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ರವರು ವಹಿಸಿದ್ದರು. ಪ್ರಾಂಶುಪಾಲರಾದ
ದಯಾಮಣಿ. ಕೆ. ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ ಸಂಸ್ಥೆಯ ನಿಯಮಗಳು ಮತ್ತು ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜೀವಶಾಸ್ತ್ರ ಉಪನ್ಯಾಸಕರಾದ ದಯಾನಂದ ಓ.ಡಿ. ಪರಿಸರದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ. ಎನ್ ಸ್ವಾಗತಿಸಿ ಸಮಾಜಶಾಸ್ತ್ರ ಉಪನ್ಯಾಸಕರಾದ ಬಾಲಕೃಷ್ಣ. ಕೆ . ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಸ್ವರ್ಣಕಲಾ.ಎ.ಎಸ್ ಕಾರ್ಯಕ್ರಮ ನಿರೂಪಿಸಿದರು.