ಮಂಗಳೂರು:ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-48(75) ರ, ಬೆಂಗಳೂರು- ಮಂಗಳೂರು ರಸ್ತೆಯ
ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೊಡ್ಡತಪ್ಪಲು ಗ್ರಾಮದ ಬಳಿ ಗುಡ್ಡಕುಸಿತ ಉಂಟಾಗಿ, ಹೆದ್ದಾರಿ ಸಂಚಾರಕ್ಕೆ ಅಡಚಣೆಯಾಗಿರುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ, ಮುಂಜಾಗ್ರತಾ ಕ್ರಮವಾಗಿ ದಿನಾಂಕ:18/07/2024 ರಿಂದ ಮುಂದಿನ ಆದೇಶದವರೆಗೆ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲ ಎಲ್ಲಾ ರೀತಿಯ ವಾಹನ ಸಂಚಾರವನ್ನು (ತುರ್ತು ಪರಿಸ್ಥಿತಿ ವಾಹನ ಹೊರತುಪಡಿಸಿ) ನಿರ್ಬಂಧಿಸಲಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಖಾಂತರ ಬೆಂಗಳೂರಿನಿಂದ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು, ಬದಲಿ ರಸ್ತೆಯಾದ ಹಾಸನ-ಬೇಲೂರು-ಮೂಡಿಗೆರೆ ಚಾರ್ಮಾಡಿ ಘಾಟ್ ಮಾರ್ಗವನ್ನು ಬಳಸಬಹುದಾಗಿತಿಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಂಪಾಜೆ-ಮಡಿಕೇರಿ ರಸ್ತೆಯಲ್ಲಿಯೂ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ