ಶಿರೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಒಂದು ಇಂದು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ.ಟ್ರಕ್ನೊಂದಿಗೆ ನಾಪತ್ತೆಯಾಗಿದ್ದ ಕೊಝಿಕ್ಕೋಡ್ ನಿವಾಸಿ ಅರ್ಜುನ್ ಅವರ ಟ್ರಕ್ ಇದೆಂದು ಹೇಳಲಾಗಿದೆ. ಇಂದು ಶೋಧ ಮುಂದುವರಿದಿರುವ ನಡುವೆ
ಟ್ರಕ್ ಗಂಗಾವಳಿ ನದಿಯಲ್ಲಿ ಮುಳುಗಿರುವ ಮಾಹಿತಿ ಲಭ್ಯವಾಗಿದೆ.ಟ್ರಕ್ ಒಂದು ಮುಳುಗಿರುವುದು ಖಚಿತವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇ ಗೌಡ ಎಕ್ಸ್ನಲ್ಲಿ ತಿಳಿಸಿದ್ದಾರೆ. ನೌಕಾಪಡೆಯ ಮುಳುಗು ತಜ್ಞರು ಅದನ್ನು ಮೇಲಕ್ಕೆ ತರಲಿದ್ದಾರೆ. ಲಾಂಗ್ ಆರ್ಮ್ ಬೂಮರ್ ಎಕ್ಸ್ಕವೇಟರ್ ಬಳಸಿ ನದಿ ನೀರಿನಲ್ಲಿ ಡ್ರೆಜ್ಜಿಂಗ್ ನಡೆಯುತಿದೆ. ಶೋಧಕ್ಕಾಗಿ ಡ್ರೋನ್ ಆಧರಿತ ಇಂಟಲಿಜೆಂಟ್ ಅಂಡರ್ಗ್ರೌಂಡ್ ಬರೀಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಂ ಅನ್ನೂ ಬಳಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಭೂಕುಸಿತದಲ್ಲಿ ಮೃತಪಟ್ಟ ಎಂಟು ಮಂದಿಯ ಮೃತದೇಹಗಳು ಇಲ್ಲಿಯ ತನಕ ಪತ್ತೆಯಾಗಿವೆ.