ಸುಳ್ಯ :ಫೆಬ್ರವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಪ್ರಭಾಕರ ಶಿಶಿಲ ಅವರನ್ನು ಕ. ಸಾ. ಪ. ವತಿಯಿಂದ ಅಭಿನಂದಿಸಲಾಯಿತು. ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ
ಮೇರು ವ್ಯಕ್ತಿತ್ವದ ಡಾ. ಪ್ರಭಾಕರ ಶಿಶಿಲರಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾದ್ಯಕ್ಷತೆ ಒಲಿದು ಬಂದಿರುವುದಕ್ಕೆ ಅಭಿನಂದಿಸಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತಿನ ವತಿಯಿಂದ ಡಾ.ಪ್ರಭಾಕರ ಶಿಶಿಲ ದಂಪತಿಗಳನ್ನು ಅವರ ಕಾಂತಮಂಗಲದ ಮನೆಯಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲ್, ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಹರೀಶ್ ಬಂಟ್ವಾಳ, ಡಾ. ರಂಗಯ್ಯ, ಶೈಲಿ ಪ್ರಭಾಕರ್, ತಾಲೂಕು ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ದಯಾನಂದ ಆಳ್ವ, ಕಾರ್ಯದರ್ಶಿ ಚಂದ್ರಾಮತಿ ಕೆ., ಕಾರ್ಯಕಾರಿ ಸಮಿತಿ ಸದಸ್ಯರಾದ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಸಾವಿತ್ರಿ ಕಣೆಮರಡ್ಕ ಉಪಸ್ಥಿತರಿದ್ದರು.