ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪತಿಷತ್ತಿನ ಸುಳ್ಯ ತಾಲೂಕು ಘಟಕ, ಅಮರ ಸುಳ್ಯ ಅಧ್ಯಯನ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ ಡಾ.ಶಂಕರ ಪಾಟಾಳಿ ಬದಿಯಡ್ಕ ವಿರಚಿತ ಆಕೃತಿ ಆಶಯ ಮಂಗಳೂರು ಇದರ ಪ್ರಕಟಿತ ‘ಶಿಶಿಲ ಚಿಂತನೆ’- ಕೃತಿ ಬಿಡುಗಡೆ ಕಾರ್ಯಕ್ರಮ
ಸುಳ್ಯ ಕನ್ನಡ ಭವನದಲ್ಲಿ ಮಾ.29ರಂದು ನಡೆಯಿತು. ಹಿರಿಯ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೋ ಕೃತಿ ಬಿಡುಗಡೆ ಮಾಡಿದರು. ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಎಂ.ಬಿ.ಸದಾಶಿವ ಕೃತಿ ಪರಿಚಯ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಡಾ.ಪ್ರಭಾಕರ ಶಿಶಿಲ, ಡಾ.ಶಂಕರ ಪಾಟಾಳಿ, ಶೈಲಿ ಪ್ರಭಾಕರ, ಕಸಾಪ ಜಿಲ್ಲಾ ಸಮಿತಿ ಸದಸ್ಯ ರಾಮಚಂದ್ರ ಪಲ್ಲತ್ತಡ್ಕ, ಸುಳ್ಯ ಹೋಬಳಿ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕಸಾಪ ಸುಳ್ಯ ಘಟಕದ ಗೌರವ ಕಾರ್ಯದರ್ಶಿಗಳಾದ ಚಂದ್ರಮತಿ ಕೆ, ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡ.ಪ್ರಭಾಕರ ಶಿಶಿಲ ಸ್ವಾಗತಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.









