ಮಂಗಳೂರು: ಭಾರತ ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಬಣ್ಣಿಸಿದರು.ಅವರು ಫೆ. 19ರ ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಹಾಗೂ ಜಿಲ್ಲೆಯ ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ

ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿಯವರ 396ನೇ ಜಯಂತಿಯಲ್ಲಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಕುದ್ರೋಳಿಯ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ್ ರಾವ್, ಮಂಗಳೂರು ಆರ್ಯ ಯಾನೆ ಮರಾಠ ಸಮಾಜದ ಸಂಘದ ಅಧ್ಯಕ್ಷ ವಾಮನ್ ವಾಗ್ಮನ್ ಮುಳ್ಳಂಗೋಡು ಶುಭಹಾರೈಸಿದರು. ಇತರೆ ಗಣ್ಯರು ವೇದಿಕೆಯಲ್ಲಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿದರು. ಬಬಿತಾ ನಿರೂಪಿಸಿದರು. ಶಿವಾಜಿ ಅಭಿಮಾನಿಗಳು, ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.