ಸುಳ್ಯ: ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಳ್ಯ ನಗರ ಪಂಚಾಯತ್‌ನ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭುರವರ ಪತಿಯಾದ ಕೇಶವ ಪ್ರಭು ಅವರು ಇಂದು ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಜಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಎಸ್‌ಐ ದಿಲೀಪ್ ಜಿ.ಆರ್. ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.